Friday, June 27, 2025
spot_imgspot_img
spot_imgspot_img

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಓರ್ವ ಗಂಭೀರ

- Advertisement -
- Advertisement -

ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿ

ಗಾಯಗೊಂಡ ಸ್ಕೂಟರ್ ಸವಾರರನ್ನು ಮಧುಸೂಧನ್, ಪ್ರಕಾಶ್ ಹಾಗೂ ಉಮೇಶ್ ಎಂದು ಗುರುತಿಸಲಾಗಿದೆ.

ಪ್ರಕಾಶ್ ಅವರು ಉಮೇಶ್ ರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಸ್ಕೂಟರ್ ಮಧುಸೂಧನ್ ಅವರು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಮಧುಸೂಧನ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಪ್ರಕಾಶ್ ಹಾಗೂ ಸಹಸವಾರ ಉಮೇಶ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!