Monday, May 20, 2024
spot_imgspot_img
spot_imgspot_img

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರೆಗೆ ಗಾಯ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg
This image has an empty alt attribute; its file name is VC_PUC_-1-819x1024.jpg

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಒಂದು ದ್ವಿಚಕ್ರ ವಾಹನದ ಸವಾರೆ ಗಾಯಗೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮ, ಬಂಟ್ವಾಳ ನಿವಾಸಿಯಾದ ವಸಂತ ಕೆ ಎಂಬವರ ದೂರಿನಂತೆ, ದಿನಾಂಕ:08.05.2024 ರಂದು ಬೆಳಿಗ್ಗೆ, ಆಕ್ಟಿವಾ ದ್ವಿಚಕ್ರ (KA.19.HE.2245) ವಾಹನವನ್ನು ಅದರ ಸವಾರ ಅಜಾಗರೂಕತೆ ಮತ್ತು ತೀವ್ರ ನಿರ್ಲಕ್ಷತನದಿಂದ ಚಲಾಯಿಸಿ, ಎದುರಿನಿಂದ ಬರುತ್ತಿದ್ದ, KA.19.EP.1358 ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ದ್ವಿಚಕ್ರ ವಾಹನದ ಸವಾರರು ವಾಹನಗಳ ಸಮೇತ ರಸ್ತೆಗೆ ಬಿದ್ದಿದ್ದಾರೆ.

ಅಪಘಾತದ ಸ್ಥಳದಲ್ಲಿದ್ದ ವಸಂತ ಕೆ ಎಂಬವರು ದ್ವಿಚಕ್ರ ವಾಹನ ಸವಾರರನ್ನು ಉಪಚರಿಸಿ ನೋಡಲಾಗಿ, KA.19.EP.1358 ದ್ವಿಚಕ್ರ ವಾಹನ ಸವಾರೆ ಅಶ್ವಿತ ಎಂಬವರಿಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವಿಟ್ಲದ ಬೆನಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಅಶ್ವಿತರವರನ್ನು ಮಂಗಳೂರು ಕೆ.ಎಸ್‌ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 84/2024, ಕಲಂ: 279,337 ಬಾಧಂಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!