Monday, May 6, 2024
spot_imgspot_img
spot_imgspot_img

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ನಡೆದ ಭೀಕರ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ.!

- Advertisement -G L Acharya panikkar
- Advertisement -

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ.

ಮೇ 29 ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನು ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುವ ಆಟೋ ಚಾಲಕ ಪ್ರವೀಣ್ ಕುಮಾರ್ ಇದನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಕೂಟರ್ ಸವಾರ ಗಣೇಶ್ ಅವರ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣಎನ್ನಲಾಗಿದೆ. ಈ ಸಂಬಂಧ ನಗರದ ಸಂಚಾರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!