Sunday, June 14, 2026
spot_imgspot_img
spot_imgspot_img

ವಿಟ್ಲ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ-ಐದು ಮಂದಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ: ವಿಟ್ಲದ ಕಾಶಿಮಠ ಎಂಬಲ್ಲಿಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಕನ್ಯಾನದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!