Monday, July 20, 2026
spot_imgspot_img
spot_imgspot_img

ಚಾರ್ಮಾಡಿ: ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಬಾಲಕ ಮೃತ್ಯು

- Advertisement -
- Advertisement -

ಚಾರ್ಮಾಡಿ: 3 ವರ್ಷ ಪ್ರಾಯದ ಮಗುವೊಂದು ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಗು ಸಾವನ್ನಪ್ಪಿದ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮಹಮ್ಮದ್ ಹಝೀರಿನ್ (3) ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ. ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದೆ.

- Advertisement -

Related news

error: Content is protected !!