Thursday, May 16, 2024
spot_imgspot_img
spot_imgspot_img

ಮಹಾರಥೋತ್ಸವದ ವೇಳೆ ಅವಘಡ; ರಥದ ಚಕ್ರಕ್ಕೆ ಸಿಲುಕಿ ಮೂವರು ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಲಚ್ಯಾಣ ಸಿದ್ದಲಿಂಗೇಶ್ವರ ಮಹಾರಥೋತ್ಸವದ ಸಂದರ್ಭದಲ್ಲಿ ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲಿ ಮೃತಪಟ್ಟು, ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಕೂಡ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಲಚ್ಯಾಣ ಗ್ರಾಮದ ಸಾಬು ಶಿಂಧೆ (55) ಹಾಗೂ ಅಭಿಷೇಕ ಮುಜುಗೊಂಡ (16) ಹಾಗೂ ಸುರೇಶ್ ಕಟಕದೊಂಡ (32) ಎಂದು ಗುರುತಿಸಲಾಗಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಭಾನುವಾರ ಲಚ್ಯಾಣದ ಶ್ರೀಸಿದ್ದಲಿಂಗ ಮಹರಾಜರ ಜಾತ್ರೆಯ ಹಿನ್ನೆಲೆಯಲ್ಲಿ ಮಹಾರಥೋತ್ಸವಕ್ಕಾಗಿ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಜಾತ್ರೆಯಲ್ಲಿ ರಥ ಸಾಗುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಇಂಡಿ ಪೊಲೀಸರು ಭೇಟಿ ನೀಡಿದ್ದಾರೆ

- Advertisement -

Related news

error: Content is protected !!