Friday, June 19, 2026
spot_imgspot_img
spot_imgspot_img

ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ ಕೋಣನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕನೋರ್ವನೇ ತೆರಳುತ್ತಿದ್ದ ಎಂದು ತಿಳಿದುಬಂದಿದೆ. ವೇಗವಾಗಿ ಬರುತ್ತಿದ್ದ ಕಾರುಎಕ್ಸ್‌ಪ್ರೆಸ್ ವೇಯ ಎಡ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ಚಾಲಕನ ತಲೆ ಹಾಗೂ ಕೈಗೆ ಗಂಭೀರ ಗಾಯಗೊಂಡಿದ್ದು, ಬಳಿಕ ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!