- Advertisement -
- Advertisement -




ಕಾರ್ಕಳ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಕಾರ್ಕಳ ಮೂಡುಬಿದ್ರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.

ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಬಸ್ಸು, ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಮಾನಾಥ ರೈ ಸವಿತಾ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳೀಯರು ರಮನಾಥ ರೈ ರವರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಬಸ್ಸಿನಲ್ಲಿದ್ದ ಮತ್ತು ಕಾರಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
- Advertisement -








