

ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರಣ ಮಹಿಳೆ ಸಾವನಪ್ಪಿ ಸ್ಕೂಟಿಯಲ್ಲಿದ್ದ ಆಕೆಯ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ
ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್ ಮಾಡುತ್ತಾ ವೇಗವಾಗಿ ಚಲಾಯಿಸಿಕೊಂಡು ಬಂದ ಪರಿಣಾಮ, ಕಾರು ನಿಯಂತ್ರಣ ತಪ್ಪಿ ಎದುರಿಗೆ ಬಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ಭಾವನಾ ಮಿಶ್ರಾ ಹಾಗೂ ಆಕೆಯ ಮಗಳು ಅವರ 13 ವರ್ಷದ ಮೇಧಾವಿ ಮಿಶ್ರಾ ಮೂವತ್ತು ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಚಾಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿ, ಕಾರು ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳೀಯರು ತಕ್ಷಣ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಹಿಳೆ ಅದಾಗಲೇ ಸಾವನ್ನಪ್ಪಿದ್ದು, ಬಾಲಕಿಗೆ ತೀವ್ರ ಗಾಯಗಳಾಗಿವೆ. ಹೆಲ್ಮೆಟ್ ಧರಿಸಿದ್ದರೂ ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಗೆ ಗಾಯವಾಗಿದ್ದು,ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿ ಬಾಲಕನಿಗೆ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಮತ್ತು ಆತ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಸ್ಟಂಟ್ ಮಾಡಲು ಮುಂದಾಗಿದ್ದ.
ಬಾಲಕನ ತಂದೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ವೇಳೆ ಬಾಲಕನ ಮೂವರು ಸ್ನೇಹಿತರು ಕಾರಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತ ಚಾಲಕನನ್ನು ಅವನ ತಂದೆಯೊಂದಿಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಮೃತಳ ಪತಿ ಅನುಪ್ ಮಿಶ್ರಾ ನೀಡಿದ ದೂರಿನ ಮೇರೆಗೆ ಪೊಲೀಸರು ಅಪರಾಧಿ ನರಹತ್ಯೆ ಮತ್ತು ಅಜಾಗರೂಕ ಚಾಲನೆ ಸೇರಿದಂತೆ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.