Saturday, June 28, 2025
spot_imgspot_img
spot_imgspot_img

ಸುಳ್ಯ: ರಸ್ತೆ ದಾಟುವಾಗ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು

- Advertisement -
- Advertisement -

ಸಂಪಾಜೆ: ರಸ್ತೆ ದಾಟುವಾಗ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸೊಸೈಟಿ ಬಳಿ ನಡೆದಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟೆಂಪೋ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ತಲೆಗೆ ಹಾಗೂ ಬಲಗೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರೀಕ್ಷಿಸಿದಾಗ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ವ್ಯಕ್ತಿಯನ್ನು ಕಲ್ಲುಗುಂಡಿ ಜನತಾ ಕಾಲೊನಿ ನಿವಾಸಿ ಚಂದ್ರಶೇಖರ(50) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಟೆಂಪೋ ಚಾಲಕನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!