Sunday, April 28, 2024
spot_imgspot_img
spot_imgspot_img

ಪಶ್ಚಿಮ ಕೀನ್ಯಾದಲ್ಲಿ 48 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು

- Advertisement -G L Acharya panikkar
- Advertisement -

ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ,ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಜನ ಮೃತಪಟ್ಟಿರುವ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ  ನಡೆದಿದೆ.
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಅಪಘಾತದ ತೀವ್ರತೆಗೆ ಸ್ಥಳದಲ್ಲೇ 48 ಜನ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಪಷ್ಟ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ರಿಫ್ಟ್ ವ್ಯಾಲಿ ಪೊಲೀಸ್ ಕಮಾಂಡರ್ ತಿಳಿಸಿದ್ದಾರೆ.

ಟ್ರಕ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳು ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ಡಿಕ್ಕಿ ಹೊಡೆದಿದ್ದು. ಸ್ಥಳೀಯರು ಘಟನೆಯ ವಿಡಿಯೋ, ಫೋಟೋಗಳನ್ನು ಸೆರೆ ಹಿಡಿದಿದ್ದಾರೆ.

- Advertisement -

Related news

error: Content is protected !!