- Advertisement -
- Advertisement -

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.




ಮಧುವನಹಳ್ಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಚಾಲಕನ ಜೊತೆಗಿದ್ದ ಕಾರ್ತಿಕ್ ಹಾಗೂ ಷಣ್ಮುಗ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಾಲಕ ಸೆಂಥಿಲ್ ಸ್ಥಳದಿಂದ ಪರಾರಿಯಾಗಿದ್ದಾನೆ.ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








