Monday, May 6, 2024
spot_imgspot_img
spot_imgspot_img

ಪಟಾಕಿ ದಾಸ್ತಾನು ಗೋದಾಮಿ​ಗೆ ಆಕಸ್ಮಿಕ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ ಭಸ್ಮ

- Advertisement -G L Acharya panikkar
- Advertisement -

ಪಟಾಕಿ ದಾಸ್ತಾನು ಗೋದಾಮಿ​ಗೆ ಬೆಂಕಿ ತಗುಲಿ, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ.

ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇದ್ದು, ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದ್ದು, ಅದರಂತೆ ಹಬ್ಬಕ್ಕೆಂದು ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಪಟಾಕಿ ಇಟ್ಟಿದ್ದ ಕಟ್ಟಡದ ಬಳಿ ವೆಲ್ಡಿಂಗ್​ ಕಾರ್ಯ ನಡೆಯುತ್ತಿದ್ದು, ಪರಿಣಾಮ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಬೆಂಕಿ ನಂದಿಸುವ ಕಾಯ೯ ಮುಂದುವರಿದಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ‌

- Advertisement -

Related news

error: Content is protected !!