Saturday, June 28, 2025
spot_imgspot_img
spot_imgspot_img

ನಿಲ್ಲಿಸಿದ್ದ ನರ್ಸಿಂಗ್ ಕಾಲೇಜಿನ ಬಸ್​ಗಳಿಗೆ ಆಕಸ್ಮಿಕವಾಗಿ ಬೆಂಕಿ: 5 ಬಸ್​ಗಳು ಸಂಪೂರ್ಣ ಬೆಂಕಿಗಾಹುತಿ

- Advertisement -
- Advertisement -

ನಿಲ್ಲಿಸಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್​ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಳೆ ಬಸ್‌ಗಳು ಕೆಟ್ಟೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಶನಿವಾರ ಮಧ್ಯಾಹ್ನ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಕಾಲೇಜು ಮಂಡಳಿ ಕರೆ ಮಾಡಿದ್ದರು. ಈ ಕುರಿತು ಪೊಲೀಸರು ತನಿಖೆ ಅರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!