- Advertisement -
- Advertisement -





ಕಾರವಾರ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವೃದ್ಧೆ ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಹನಮಾಪುರದಲ್ಲಿ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಪಕೀರವ್ವ ರಾಮಣ್ಣ ಆಲೂರು (70) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಪಕೀರವ್ವ ಮಲಗಿದ್ದ ವೇಳೆ ಮನೆಗೆ ಆಕಸ್ಮಿಕ ಬೆಂಕಿ ತಗಲಿದೆ. ಬೆಂಕಿ ತಗುಲಿದ ಪರಿಣಾಮ ಪಕೀರವ್ವ ಜೀವಂತ ಸುಟ್ಟುಹೋಗಿದ್ದಾರೆ. ಘಟನೆ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








