Thursday, June 18, 2026
spot_imgspot_img
spot_imgspot_img

ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ಸಹಿತ ಆರೋಪಿ ವಶಕ್ಕೆ..!

- Advertisement -
- Advertisement -

ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮಾರ ಎಂದು ಗುರುತಿಸಲಾಗಿದೆ.

ಈತ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿ ಮೇರೆಗೆ ರಾಮಾಪುರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. 211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿ ಮಾರನನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!