Wednesday, June 17, 2026
spot_imgspot_img
spot_imgspot_img

ಗಗನಸಖಿ ಹತ್ಯೆ ಪ್ರಕರಣ- ಲಾಕಪ್ ನಲ್ಲಿ ಆರೋಪಿ ಆತ್ಮಹತ್ಯೆ

- Advertisement -
- Advertisement -

ತರಬೇತಿ ಪಡೆಯುತ್ತಿದ್ದ ಗಗನಸಖಿ ರೂಪಾಲ್ ಓಗ್ರೆ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 3 ರಂದು ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ ಉಪನಗರ ಅಂಧೇರಿಯ ಮರೋಲ್ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ ಕುತ್ತಿಗೆ ಸೀಳಿದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅದೇ ಫ್ಲಾಟ್ ನಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತಾನೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು ಅಂಧೇರಿ ಪೊಲೀಸ್ ಠಾಣೆಯ ಲಾಕಪ್ ನಲ್ಲಿ ಇರಿಸಲಾಗಿದ್ದು, ಲಾಕಪ್ ನಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!