- Advertisement -
- Advertisement -




ಧಾರವಾಡ: ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.
ಮಣಿಕಂಠ ಗಾಣಿಗೇರ(10) ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ.
ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿ, ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಎಸ್ಕೇಪ್ ಆಗಿದ್ದಾರೆ. ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿದ್ದಾರೆ.
ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಿದ್ದಾರೆ ಎಂಬ ಆತಂಕ ಪೋಷಕರಲ್ಲಿ ಉಂಟಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಗ್ರಾಮಕ್ಕೆ ಕುಂದಗೋಳ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








