- Advertisement -
- Advertisement -



ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಿನಾಂಕ: 11-11-2013 ರಂದು ದಾಖಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
ದೂರುದಾರರಾದ ಚಿತ್ರಶೇಖರ ಮಡಂತ್ಯಾರ್ ಎಂಬವರಿಗೆ ಆರೋಪಿ ಆಲ್ವಿನ್ ರೊಡ್ರಿಗಸ್ ಇವರಿಂದ ಹಲ್ಲೆ ನಡೆದಿದೆ ಎಂದು ಅ. ಕ್ರ 65/2013 ಕಲಂ 324, 504 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸದರಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. 13 ವರ್ಷಗಳ ಬಳಿಕ ಇತ್ತೀಚೆಗೆ ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಪ್ರದೇಶದಲ್ಲಿ ಪೋಲಿಸರು ಈತನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
- Advertisement -







