Friday, April 19, 2024
spot_imgspot_img
spot_imgspot_img

ಧರ್ಮಸ್ಥಳ ಸಂಘದ ಸಾಲದ ಕಂತು ಪಾವತಿಸದ್ದಕ್ಕೆ ಸಂಘದವರಿಂದ ಮನೆಗೆ ಬಂದು ಗಲಾಟೆ ಆರೋಪ: ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.

ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ .

ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ ಬೆಳಗ್ಗೆ ಅರ್ಪಿತಾ ಮನೆಗೆ ತೆರಳಿ ಸಾಲದ ವಿಚಾರವಾಗಿ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಎರಡೂ ಕಡೆಯವರಿಂದ ವಾಗ್ವಾದ ನಡೆದಿದ್ದು, ಈ ವೇಳೆ ಸಂಘದವರು, ಸಾಲ ಕಟ್ಟಲಾಗದಿದ್ದರೆ, ಎಲ್ಲಾದರು ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎನ್ನಲಾಗಿದ್ದು, -ಅರ್ಪಿತಾ ಮೇಲೆ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹಲ್ಲೆ, ನಿಂದನೆಯಿಂದ ಮನನೊಂದ ಅರ್ಪಿತಾ ಮನೆಯಲ್ಲಿ ತನ್ನ ಮಗುವಿನೊಂದಿಗೆ ಒಬ್ಬರೇ ಇದ್ದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!