Sunday, June 7, 2026
spot_imgspot_img
spot_imgspot_img

ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್..!

- Advertisement -
- Advertisement -

ಬೆಂಗಳೂರು: ಲಿಫ್ಟ್ ಕೇಳಿದ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್‌ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಈ ವೇಳೆ ಯುವತಿ ಈತನ ಕೃತ್ಯಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಜೊತೆಗೆ ಇದೇ ವೇಳೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಪರಾರಿಯಾಗಿದ್ದಾನೆ.

- Advertisement -

Related news

error: Content is protected !!