Monday, June 15, 2026
spot_imgspot_img
spot_imgspot_img

ಆಸಿಡ್ ದಾಳಿಗೆ ತುತ್ತಾದ ಮಹಿಳೆ ಸಾವು.

- Advertisement -
- Advertisement -

ನೆಲ್ಯಾಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.24ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ (33) ಎಂಬವರು ಮೃತರಾಗಿದ್ದಾರೆ.

ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಇದರಲ್ಲಿ ಝಾನ್ಸಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು,ಗಂಭೀರ ಗಾಯಗೊಂಡಿದ್ದ ಶೈನಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಕಲಹ ಏರ್ಪಟಿದ್ದು ಈ ಹಿನ್ನೆಲೆಯಲ್ಲಿ ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಸೆ೨೪ರಂದು ಬೆಳಿಗ್ಗೆ 6 ಗಂಟೆಯ ವೇಳೆಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ.ನಂತರದಲ್ಲಿ ಪೋಲೀಸರು ಈತನನ್ನು ಬಂಧಿಸಿದ್ದರು.ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಸ್ವರೂಪದ ಸುಟ್ಟ ಗಾಯವಾಗಿತ್ತು.

- Advertisement -

Related news

error: Content is protected !!