Saturday, June 20, 2026
spot_imgspot_img
spot_imgspot_img

ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ.!

- Advertisement -
- Advertisement -

ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಮಾದಕ ವಸ್ತು ನಂಟಿನ ವಿಚಾರದ ಬಗ್ಗೆ  ತನಿಖೆ ನಡೆಸುತ್ತಿದ್ದ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ) ಎನ್ ಸಿಬಿ ಅಧಿಕಾರಿಗಳು ಸುಶಾಂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಮಂಗಳವಾರ ಬಂಧಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣ ಡ್ರಗ್ಸ್ ತಿರುವು ಪಡೆದುಕೊಂಡಿತ್ತು. ರಿಯಾ ಚಕ್ರವರ್ತಿ ವಾಟ್ಸಪ್ ಸ್ಕ್ರೀನ್‍ಶಾಟ್ ಆಧರಿಸಿ ಎನ್‍ಸಿಬಿ ಪ್ರಕರಣ ದಾಖಲಿಸಿಕೊಂಡಿತ್ತು. ತನಿಖೆಗೆ ಹಾಜರಾದ ರಿಯಾ ಚಕ್ರವರ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಇಂದು ಸಂಜೆ ಐದು ಗಂಟೆಯ ಸುಮಾರಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ವರದಿಯಾಗಿದೆ.ಪ್ರಕರಣ ಸಂಬಂಧ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಯನ್ನು ಎನ್ಸಿಬಿ ಅಧಿಕಾರಿಗಳು ಕಳೆದ ವಾರ ಬಂಧಿಸಿದ್ದರು. ಇದೀಗ ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!