Saturday, June 6, 2026
spot_imgspot_img
spot_imgspot_img

ಪುತ್ತೂರು: ಕೆಲಸದ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಚಾರ: ಆರೋಪಿಗಳಿಬ್ಬರ ಹೆಡೆಮುರಿ ಕಟ್ಟಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು

- Advertisement -
- Advertisement -

ಪುತ್ತೂರು: ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು ಬಿದ್ದಾಗ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದಾಗ ಯುವಕರ ಈ ಕೃತ್ಯ ಬೆಳಕಿಗೆ ಬಂದಿದೆ.ಸಂತ್ರಸ್ತ ಯುವತಿಯ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಕರ್ವೇಲು ನಿವಾಸಿ ಮತ್ತು ಬಂಟ್ವಾಳ ತಾಲೂಕು ನಿವಾಸಿ ಇಬ್ಬರನ್ನು ಪುತ್ತೂರು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳಿಬ್ಬರನ್ನು ಹೆಡೆಮುರಿ ಕಟ್ಟುವಲ್ಲಿ ಪುತ್ತೂರು ಮಹಿಳಾ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

- Advertisement -

Related news

error: Content is protected !!