- Advertisement -
- Advertisement -





ಕನ್ನಡ ಚಿತ್ರರಂಗದ ಖ್ಯಾತ ನಟರಾದ ಶ್ರೀಮುರಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ (70) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಹಾಗೂ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
- Advertisement -








