Sunday, June 14, 2026
spot_imgspot_img
spot_imgspot_img

ಕೊಲೆ ಕೇಸ್‌ನಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು.

ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!