Friday, June 27, 2025
spot_imgspot_img
spot_imgspot_img

ನಟ ದರ್ಶನ್‌ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು: 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದ್ದರು.

ಮೈಸೂರಿನಲ್ಲಿನ ಶೂಟಿಂಗ್‌ಗೆ ತೆರಳಿದ್ದ ದರ್ಶನ್‌ರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು. 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -

Related news

error: Content is protected !!