- Advertisement -
- Advertisement -
ಚೆನ್ನೈ(ಅ.27): ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದೆ.ಇತ್ತೀಚೆಗೆ ಅಷ್ಟೇ ಬಿಜೆಪಿ ಸೇರಿದ್ದರು.

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಸಿಕೆ ನಾಯಕ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿದಂಬರಂಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತುಕಾಡು ಬಳಿ ಅವರನ್ನು ಬಂಧಿಸಲಾಗಿದೆ.

ತಮ್ಮ ಬಂಧನದ ಬಳಿಕ ಟ್ವೀಟ್ ಮಾಡಿರುವ ಖುಷ್ಬೂ ನನ್ನ ಪ್ರಯಾಣಕ್ಕೆ ಅವಕಾಶ ನೀಡದೇ ಹಕ್ಕು ಕಸಿದುಕೊಳ್ಳಲಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲವೇ? ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಬಗ್ಗೆ ತಮಿಳುನಾಡು ಸಿಎಂ ಮತ್ತು ಎಐಎಡಿಎಂಕೆ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.

- Advertisement -








