Monday, April 29, 2024
spot_imgspot_img
spot_imgspot_img

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ

- Advertisement -G L Acharya panikkar
- Advertisement -

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯು ಸೇರಿದೆ.

ಈ ಕುರಿತಂತೆ ಸರ್ಕಾರದ ಕಾರ್ಯದರ್ಶಿಯಾಗಿರುವಂತ ರಂದೀಪ್‌.ಡಿ ಅವರು ಟಿಪ್ಪಣಿ ಹೊರಡಿಸಿದ್ದು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ.

ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ.
ಈಗ ಬಿಡುಗಡೆಯಾಗಿರುವಂತ 44 ನಿಗಮ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿ ಆದೇಶದ ಪಟ್ಟಿಯಲ್ಲಿ, ನಟ ಸಾಧು ಕೋಕಿಲ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

- Advertisement -

Related news

error: Content is protected !!