Saturday, July 25, 2026
spot_imgspot_img
spot_imgspot_img

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್

- Advertisement -
- Advertisement -

ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ.

ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ದಾಳಿ ವೇಳೆ 20ರಿಂದ 25 ವಯಸ್ಸಿನ ಯುವಕರು ಈ ದಂಧೆಯಲ್ಲಿ ನಿರತರಾಗಿರುವುದು, ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್‌ನನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್‌ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55,000 ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್‌ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು.

- Advertisement -

Related news

error: Content is protected !!