Saturday, June 6, 2026
spot_imgspot_img
spot_imgspot_img

ನಟ ಯಶ್ ಬರ್ತ್‍ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ – ಮೂವರ ದುರ್ಮರಣ

- Advertisement -
- Advertisement -

ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಹನಮಂತ ಹರಿಜನ್‌ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಸ್ಯಾಂಡಲ್ ವುಡ್ ನಟ ಯಶ್ ಅವರ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡುವ ಹಿನ್ನಲೆ
ತಡರಾತ್ರಿ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ಬಗ್ಗೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!