Sunday, June 29, 2025
spot_imgspot_img
spot_imgspot_img

ನಟಿ ಅನುಷ್ಕಾ ಶೆಟ್ಟಿ ಕನ್ನಡ ನಿರ್ಮಾಪಕರ ಜೊತೆ ಮದುವೆ…?

- Advertisement -
- Advertisement -

ನಟಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ. ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ವೀಟಿ ಮದುವೆ ಮ್ಯಾಟರ್ ಕೇಳಿ ಫ್ಯಾನ್ಸ್ ಖುಷಿಪಡುತ್ತಿದ್ದಾರೆ.

ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ನಟಿ ಮದುವೆಯಾಗುವ ವರನ ಬಗ್ಗೆ ಮಾಹಿತಿ ಹೊರಬೀಳಬೇಕಿದೆ.

ಅನುಷ್ಕಾ ಮದುವೆಗೆ ತಯಾರಿ ಶುರುವಾಗಿದೆ ಎನ್ನಲಾಗಿದೆ. ಸದ್ಯದಲ್ಲೇ ಮದುವೆ ಸುದ್ದಿ ಬಗ್ಗೆ ಅನುಷ್ಕಾ ಕುಟುಂಬ ಅಧಿಕೃತ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಆದರೆ, ಅವರ ಸಹೋದರ ಪ್ರತಿಕ್ರಿಯಿಸಿದ್ದು ಅನುಷ್ಕಾ ಸದ್ಯ ಮಲೆಯಾಳಂ ಮತ್ತು ತೆಲುಗು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು ಮದುವೆ ಬಗ್ಗೆ ಯಾವುದೇ ತಯಾರಿ ನಡೆದಿಲ್ಲ ಎಂದಿದ್ದಾರೆ.

- Advertisement -

Related news

error: Content is protected !!