- Advertisement -
- Advertisement -


ಸುಂಟರಗಾಳಿ’ ಸಿನಿಮಾದ `ಸಾರಾಯಿ ಶಾರದೆ’ ಖ್ಯಾತಿಯ ಪೋಷಕನಟಿ ಲಲಿತಮ್ಮ ನಿಧನರಾಗಿದ್ದಾರೆ.
ಲಲಿತಮ್ಮನವರಿಗೆ 65 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಅವರಿಗೆ ಸ್ಟ್ರೋಕ್ ಆಗಿತ್ತು. ಕಳೆದ ಕೆಲ ದಿನಗಳಿಂದ `ಅಮ್ಮನ ಮಡಿಲು ಟ್ರಸ್ಟ್’ ಆಶ್ರಮದಲ್ಲಿ ಅವರ ಆರೈಕೆ ಮಾಡಲಾಗುತ್ತಿತ್ತು .
ಜಂಗ್ಲಿ, ಲೈಫ್ ಇಷ್ಟೇನೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಲಲಿತಮ್ಮ ಅಭಿನಯಿಸಿದ್ದರು. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಲಲಿತಮ್ಮ ಕೊನೆಯುಸಿರೆಳೆದಿದ್ದಾರೆ.
ಲಲಿತಮ್ಮ ಸುಮಾರು 35 ವರ್ಷಗಳ ಕಾಲ ರಂಗಭೂಮಿಯಲ್ಲಿ ಕಲಾ ಸೇವೆ ಸಲ್ಲಿಸಿದ್ದಾರೆ. ನೂರಾರು ನಾಟಕ ಹಾಗೂ ಪ್ರದರ್ಶನಗಳಲ್ಲಿ ಅಭಿನಯಿಸಿದ್ದಾರೆ. ಬಳಿಕ ಕಿರುತೆರೆ ಹಾಗೂ ಸಿನಿಮಾರಂಗದಲ್ಲೂ ಗುರುತಿಸಿಕೊಂಡಿದ್ದಾರರು.
- Advertisement -








