Tuesday, June 23, 2026
spot_imgspot_img
spot_imgspot_img

600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ

- Advertisement -
- Advertisement -

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ . ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇಂದು ನಿಧನರಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು. ಪುತ್ರ ವಿನೋದ್​ ರಾಜ್​ ಅವರನ್ನು ಲೀಲಾವತಿ ಅಗಲಿದ್ದಾರೆ.

- Advertisement -

Related news

error: Content is protected !!