Thursday, April 25, 2024
spot_imgspot_img
spot_imgspot_img

3 ದಿನ ಸಿಸಿಬಿ ಕಸ್ಟಡಿಗೆ ನಟಿ ರಾಗಿಣಿ, ಸಂಜನಾ

- Advertisement -G L Acharya panikkar
- Advertisement -

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪೊಲೀಸರಿಂದ ಬಂಧನವಾಗಿರುವ ನಟಿ ರಾಗಿಣಿ,ಸಂಜನಾ ಸೇರಿ 6 ಜನ ಆರೋಪಿಗಳು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.ಸಿಸಿಬಿ ಪೊಲೀಸರು ರವಿಶಂಕರ್, ನಟಿಯರಾದ ರಾಗಿಣಿ ದ್ವೀವೇದಿ, ಸಂಜನಾ ಗಲ್ರಾಣಿ, ಡ್ರಗ್ ಪೆಡ್ಲರ್‍ಗಳಾದ ರಾಹುಲ್ ತೋನ್ಸೆ, ವೀರೇನ್ ಖನ್ನಾ ಮತ್ತು ವಿದೇಶಿ ಪ್ರಜೆ ಲೂಮ್ ಪೆಪ್ಪರ್‍ರನ್ನು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು.ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ನಟಿಯನ್ನು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.ಸೋಮವಾರದ ವರೆಗೂ ನಟಿ ರಾಗಿಣಿ ಮತ್ತು ಸಂಜನಾ ಅವರು ಪೊಲೀಸ್ ಕಸ್ಟಡಿಯಲ್ಲೇ ಉಳಿಯಲ್ಲಿದ್ದಾರೆ.

- Advertisement -

Related news

error: Content is protected !!