Friday, April 26, 2024
spot_imgspot_img
spot_imgspot_img

ಕೂದಲೆಳೆಯ ಅಂತರದಲ್ಲಿ ಭಾರತಕ್ಕೆ ಪದಕ ಮಿಸ್: ಗಾಲ್ಫ್ ನಲ್ಲಿ ಮಿಂಚು ಹರಿಸಿದ ಕರುನಾಡ ಅದಿತಿಗೆ 4ನೇ ಸ್ಥಾನ..!

- Advertisement -G L Acharya panikkar
- Advertisement -

ಟೋಕಿಯೋ ಒಲಿಂಪಿಕ್ಸ್ನಲ್ಲಿ ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದ್ದರೂ ಪದಕ ಗೆಲ್ಲುವಲ್ಲಿ ವಿಫಲವಾಗಿದ್ದರೂ ಒಲಿಂಪಿಕ್ಸ್ ಇತಿಹಾಸದಲ್ಲಿ ಇತಿಹಾಸ ಬರೆದಿದ್ದಾರೆ. ಜಗತ್ತಿನ ಅತ್ಯುನ್ನತ ಶ್ರೇಯಾಂಕದ ಕ್ರೀಡಾಳುಗಳನ್ನು ನಾಚಿಸುವಂತ ಪ್ರದರ್ಶನ ನೀಡಿದ ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಒಲಿಂಪಿಕ್ಸ್ನಲ್ಲಿ ಇತಿಹಾಸ ಬರೆದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಕೂದಲೆಳೆಯ ಅಂತರದಲ್ಲಿ ಪದಕ ಕೈತಪ್ಪಿದೆ.

ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೆ ವಿಭಾಗದಲ್ಲಿ ಅದಿತಿ 3ನೇ ಸುತ್ತಿನ ಅಂತ್ಯಕ್ಕೆ 2ನೇ ಸ್ಥಾನದಲ್ಲಿದ್ದರು. ಶನಿವಾರ ನಡೆದ ಸುತ್ತಿನಲ್ಲಿ ಅದಿತಿ ಮೂರನೇ ಸ್ಥಾನ ಪಡೆದುಕೊಂಡರಾದರೂ ನ್ಯೂಜಿಲೆಂಡ್ ನ ಲೈಡಿಯಾ ಕೊ ಜೊತೆ ಟೈ ಆಯಿತು. ಎರಡನೇ ಸ್ಥಾನದಲ್ಲಿ ಜಪಾನ್ ಹಾಗೂ ಮೂರನೇ ಸ್ಥಾನದಲ್ಲಿ ಅಮೆರಿಕಾ ಇತ್ತು. ಅಂತಿಮ ಹಂತದಲ್ಲಿ ಅದಿತಿ 4ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

ಮೂರು ಸುತ್ತಿನ ಅಂತ್ಯಕ್ಕೆ ಪದಕ ಬೇಟೆಯಲ್ಲಿದ್ದ ಅದಿತಿ, ಶನಿವಾರ ನಡೆದ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಇದರಿಂದಾಗಿ ಎರಡನೇ ಸ್ಥಾನದಲ್ಲಿದ್ದ ಅದಿತಿ ನಾಲ್ಕನೇ ಸ್ಥಾನಕ್ಕೆ ಕುಸಿದರು. ಹಾಗಿದ್ದರೂ 23 ವರ್ಷದ ಬೆಂಗಳೂರು ಮೂಲದ ಅದಿತಿ, ಒಲಿಂಪಿಕ್ಸ್ ಗಾಲ್ಫ್ ಇತಿಹಾಸದಲ್ಲೇ ಭಾರತದ ಪರ ಶ್ರೇಷ್ಠ ಸಾಧನೆ ಮಾಡಿದ ಹಿರಿಮೆಗೆ ಪಾತ್ರರಾಗಿದ್ದಾರೆ.

- Advertisement -

Related news

error: Content is protected !!