Monday, April 29, 2024
spot_imgspot_img
spot_imgspot_img

8 ವರ್ಷಗಳ ಬಳಿಕ RSS ಕಾರ್ಯಕರ್ತನ ಕೊಲೆ ಆರೋಪಿಯ ಬಂಧನ

- Advertisement -G L Acharya panikkar
- Advertisement -

ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕ ಮೊಹಮ್ಮದ್ ಗೌಸ್ ನಿಯಾಜಿ, 2016ರಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಎಂಬಾತನನ್ನ ಹತ್ಯೆಗೈದಿದ್ದ. ಘಟನೆ ನಂತರ ದೇಶದಿಂದ ಪಲಾಯನ ಮಾಡಿದ್ದ ನಿಯಾಜಿ, ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ ಎಂದು ಎನ್‌ಎಐ ಮೂಲಗಳು ಹೇಳಿವೆ.

ರುದ್ರೇಶ್‌ನನ್ನ ಹತ್ಯೆಗೈದಿದ್ದ ನಿಯಾಜಿ ವಿವಿಧ ದೇಶಗಳಲ್ಲಿ ತಲೆ ಮರೆಸಿಕೊಂಡಿದ್ದ. ತನಿಖೆಯ ಮುಂದಾಳತ್ವ ವಹಿಸಿದ್ದ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ನಿಯಾಜಿಯ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಕೊನೆಗೆ ಆತ ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿರುವ ಬಗ್ಗೆ ಸುಳಿವು ಸಿಕ್ಕಿತು. ಕೂಡಲೇ ಈ ಮಾಹಿತಿಯನ್ನು ಕೇಂದ್ರದ ಭದ್ರತಾ ಏಜೆನ್ಸಿಗೆ ರವಾನಿಸಿತು. ನಂತರ ಎನ್‌ಐಎ ದಕ್ಷಿಣ ಆಫ್ರಿಕಾದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.

ಆರೋಪಿ ನಿಯಾಜಿನನ್ನ ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಿದ ನಂತರ ತ್ವರಿತವಾಗಿ ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಸದ್ಯ ಆರೋಪಿಯನ್ನು ಮುಂಬೈಗೆ ಕರೆತರಲಾಗುತ್ತಿದ್ದು, ಮುಂಬೈನಲ್ಲೇ ವಿಚಾರಣೆ ನಡೆಸಲಾಗುತ್ತದೆ ಎಂದು ಎನ್‌ಐಎ ಅಧಿಕಾರಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!