ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಘಟನೆ ಮಾಸುವ ಮುನ್ನವೇ ಯಾದಗಿರಿಯಲ್ಲಿಅನ್ಯಕೋಮಿನ ಗ್ಯಾಂಗ್ ನಿಂದ ಹಿಂದೂ ಯುವಕನನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಫಯಾಜ್ ಅಂಡ್ ಗ್ಯಾಂಗ್‌ನಿಂದ ಹಿಂದೂ ಯುವಕ ರಾಕೇಶ್ ನನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕ ದಲಿತ ಸಮುದಾಯಕ್ಕೆ ಸೇರಿದ ರಾಕೇಶ್ (22) ಎಂದು ಗುರುತಿಸಲಾಗಿದೆ. ಈತನನ್ನು ಫಯಾಜ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಹಾಪೂರ ಪೇಟ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ಹಿಂದೂ ಯುವಕ ರಾಕೇಶ್‌ನ ಕೊಲೆಯಾದ್ರೂ ಪೊಲೀಸರು ಕೇಸ್ ದಾಖಲಿಸಿಕೊಂಡಿಲ್ಲ. ಮೃತ ದೇಹವನ್ನು 18 ಗಂಟೆಗಳ ಬಳಿಕ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಹಿಂದು ಯುವಕನ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಪ್ರಯತ್ನಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ದೊಡ್ಡ ಮಟ್ಟದ ಪ್ರತಿಭಟನೆ ವ್ಯಕ್ತವಾಗಬಹುದು ಎಂಬ ಸುಳಿವು ಸಿಕ್ಕ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ಪೊಲೀಸರು ಮೃತ ರಾಕೇಶನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮರಣೋತ್ತರ ಪರೀಕ್ಷೆ ನಂತರ ಕೊಲೆಯ ಬಗ್ಗೆ ಮಾಹಿತಿ ಲಭ್ಯವಾಗಲಿದೆ.