ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್‌ಶೀಟ್ ಅನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ ಸೋಮವಾರ ಸಲ್ಲಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಇತ್ತೀಗೆಚೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು ಎರಡನೇ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿದ್ದರು. ಮನೆ ಕ್ಲೀನ್ ಮಾಡಲು ಬಂದಿದ್ದಾಕೆ ಮೇಲೆ ಎರಗಿದ್ದ. ಕ್ಲೀನ್ ಮಾಡಲೆಂದು ಮನೆಗೆ ಬಂದಿದ್ದ ಮಹಿಳೆ ಮೇಲೆ, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ಎಸಗಿದ್ದರು. ರೇಪ್ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಂತೆ. ಯಾರಿಗಾದ್ರೂ ಹೇಳಿದ್ರೆ ನಿನ್ನ ಪತಿಯನ್ನು ಜೈಲಿಗೆ ಕಳಿಸುವುದಾಗಿ ಬೆದರಿಸಿದ್ದರು.
ಇಷ್ಟೆ ಅಲ್ಲದೇ ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿತ್ತು. ಇನ್ನು ಸಾಕ್ಷ್ಯನಾಶ ಮಾಡುವ ಸಲುವಾಗಿಯೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಅಂತಾ, ಹೊಳೆನರಸೀಪುರ ಠಾಣೆಯಲ್ಲಿನ ಕೇಸ್ನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದರು.
ಈ ಪ್ರಕರಣದಲ್ಲಿ ಈವರೆಗೆ ನಡೆಸಿದ ತನಿಖೆಯಲ್ಲಿ ಸಂತ್ರಸ್ತ ಮಹಿಳೆಯ ಹೇಳಿಕೆ, ಸಾಂದರ್ಭಿಕ ಸಾಕ್ಷಿ ಮತ್ತು ಸಂತ್ರಸ್ತೆಯ ಅಶ್ಲೀಲ ವೀಡಿಯೋ ಕ್ಲಿಪ್‌ಗಳು, ಎಫ್‌ಎಸ್‌ಎಲ್ ವರದಿಗಳು ಹಾಗೂ ತಾಂತ್ರಿಕ ಸಾಕ್ಷ್ಯಾಧಾರ ಆಧಾರದ ಮೇಲೆ ಕಲಂ 376(2)(K), 376(2)(N), 354(A), 354(B), 354(C), 506, 201 ಐಪಿಸಿ ಮತ್ತು ಕಲಂ 66(E), ಐಟಿ ಆಕ್ಟ್-2008 ರೀತ್ಯಾ ಅಪರಾಧ ಎಸಗಿರುವುದು ದೃಢಪಟ್ಟಿದೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.