Sunday, August 2, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮತ್ತೆ ಲಾಕ್‌ಡೌನ್ ಭೀತಿ..!

- Advertisement -
- Advertisement -

ಬೆಂಗಳೂರು: ಅನ್ ಲಾಕ್ ಬಳಿಕ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ಮೂರನೇ ಅಲೆ ಬಗ್ಗೆ ಸಾಕಷ್ಟು ಎಚ್ಚರ ವಹಿಸುವಂತೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ಉಡುಪಿ, ಕೊಡಗು ಮತ್ತು ಶಿವಮೊಗ್ಗ, ಜಿಲ್ಲೆಗಳು ಡೇಂಜರ್ ಜೋನ್ ನಲ್ಲಿವೆ. ಈ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಕೂಡ ಹೆಚ್ಚಳವಾಗಿದ್ದು ಅಲರ್ಟ್ ಆಗಿರುವಂತೆ ಎಚ್ಚರಿಸಿರುವುದರಿಂದ ಮತ್ತೆ ಲಾಕ್ ಡೌನ್ ಭೀತಿ ಆವರಿಸಿದೆ.

ಕೊರೋನಾ ಕೇಸ್ ಗಳು ಹೆಚ್ಚಾಗಿರುವುದರಿಂದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಒಡಿಶಾ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ.

- Advertisement -

Related news

error: Content is protected !!