Friday, March 21, 2025
spot_imgspot_img
spot_imgspot_img

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ; ತಪ್ಪಿದ ಅನಾಹುತ..!

- Advertisement -
- Advertisement -

ಪ್ರಯಾಗ್​ರಾಜ್​: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದ್ದು, ಹರಿಹರಾನಂದ ಸ್ವಾಮೀಜಿಯು ಉಳಿದುಕೊಂಡಿದ್ದ ಟೆಂಟ್​ನಲ್ಲಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು ಎನ್ನಲಾಗಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಘಟನೆ ಓಲ್ಡ್ ಜಿಟಿ ರಸ್ತೆಯ ತುಳಸಿ ಛೇದಕ ಬಳಿ ನಡೆಯುತ್ತಿದ್ದ ಶಿಬಿರದಲ್ಲಿ ನಡೆದಿದೆ ಎಂದು ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ತಿಳಿಸಿದ್ದಾರೆ.

ಸ್ಥಳದಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡ ತಲುಪಿದ್ದು, ಬೆಂಕಿಗೆ ಕಾರಣವೇನೆಂಬುದರ ಕುರಿತು ತನಿಖೆ ನಡೆಯುತ್ತಿದೆ. ಇದರ ಮೊದಲೇ ಎರಡು ಬಾರಿ ಅಗ್ನಿ ಅವಘಡಗಳು ಸಂಭವಿಸಿದ್ದವು. ಅಲ್ಲದೆ, ಕೆಲವು ದಿನಗಳ ಹಿಂದೆ ಕಾಲ್ತುಳಿತಗೊಂಡು 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

- Advertisement -

Related news

error: Content is protected !!