- Advertisement -
- Advertisement -
ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್ 10ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವ ಸುರೇಶ್ ಕುಮಾರ್, ಸೋಮವಾರ ಫಲಿತಾಂಶ ಪ್ರಕಟ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ ರಿಸಲ್ಟ್ ಅನೌನ್ಸ್ ಮಾಡಲಾಗುವುದು ಎಂದು ತಿಳಿಸಿದರು.
ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಿತ್ತು. ಜೂನ್ 25 ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದರು.
- Advertisement -