Saturday, June 28, 2025
spot_imgspot_img
spot_imgspot_img

ಅಹಮದಾಬಾದ್ ವಿಮಾನ ದುರಂತ: 215 ಡಿಎನ್‌ಎ ಮ್ಯಾಚ್; 198 ಮೃತದೇಹ ಹಸ್ತಾಂತರ..!

- Advertisement -
- Advertisement -

ಅಹಮದಾಬಾದ್: “ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಈವರೆಗೆ ಡಿಎನ್‌ಎ ಹೊಂದಾಣಿಕೆ ಮೂಲಕ ಒಟ್ಟು 215 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 198 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ” ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ಮಾಹಿತಿ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್ ಆಗಿವೆ. ಈ ಪೈಕಿ 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್, 32 ಬ್ರಿಟಿಷ್ ಮತ್ತಿ ಕೆನಡಿಯನ್ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ” ಎಂದು ತಿಳಿಸಿದ್ದಾರೆ.

“15 ಮೃತದೇಹಗಳನ್ನು ಏರ್ ಅಂಬುಲೆನ್ಸ್ ಹಾಗೂ 183 ಮೃತದೇಹಗಳನ್ನು ರೋಡ್ ಅಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಇದೆಲ್ಲವೂ ಸೇರಿ ಒಟ್ಟಾರೆ 222 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. 8 ಮಂದಿ ಮೃತದೇಹಗಳ ಗುರುತು ಮಾತ್ರ ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗಿದೆ.

- Advertisement -

Related news

error: Content is protected !!