- Advertisement -
- Advertisement -
ನವದೆಹಲಿ: ಕೊರೊನಾ ನಂತರ ಆರೈಕೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

ಶನಿವಾರ ಏಮ್ಸ್ ಆರೋಗ್ಯ ಅಧಿಕಾರಿಗಳು, ಕೇಂದ್ರ ಗೃಹ ಸಚಿವರು ಚೇತರಿಸಿಕೊಂಡಿದ್ದಾರೆ . ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಆಗಸ್ಟ್ 2 ರಂದು, 55 ವರ್ಷದ ಶಾ ಅವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ಅಮಿತ್ ಷಾ ಟ್ವಿಟ್ಟರ್ ನಲ್ಲಿ ತಿಳಿಸಿದ್ದರು.

ನಂತರ ಅವರು ಮೆಡಂತಾ ಆಸ್ಪತ್ರೆಯಲ್ಲಿ ಕರೋನ ಸೋಂಕಿಗೆ ಚಿಕಿತ್ಸೆ ಪಡೆದರು. ಬಳಿಕ ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಡಿಸ್ಚಾರ್ಜ್ ಆದ ಕೆಲವು ದಿನಗಳ ನಂತರ ಆಯಾಸ ಮತ್ತು ದೇಹದಲ್ಲಿ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಗಸ್ಟ್ 18 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Advertisement -