Friday, March 29, 2024
spot_imgspot_img
spot_imgspot_img

ಲ್ಯಾಡಿಂಗ್​ ವೇಳೆ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಏರ್​ ಇಂಡಿಯಾ ಎಕ್ಸ್​​ಪ್ರೆಸ್​​ ವಿಮಾನ!

- Advertisement -G L Acharya panikkar
- Advertisement -

ವಿಜಯವಾಡ: ಏರ್​ ಇಂಡಿಯಾ ಎಕ್ಸ್​​ಪ್ರೆಸ್​​ ವಿಮಾನ ಲ್ಯಾಡಿಂಗ್​ ವೇಳೆ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಆಂಧ್ರ ಪ್ರದೇಶದ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ವಿಮಾನದ ರೆಕ್ಕೆಯ ಭಾಗ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿಮಾನದಲ್ಲಿದ್ದ 64 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಮಾನ ನಿಲ್ದಾಣದ ನಿರ್ದೇಶಕ ಸಿ.ಮಧುಸೂದನ್ ರಾವ್, ವಿಮಾನದಲ್ಲಿದ್ದ 64 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಡದ ಗನ್ನವರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಡಿಂಗ್​ ವೇಳೆ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ 63 ಪ್ರಯಾಣಿಕರು ಪಾರಾಗಿದ್ದಾರೆ ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಟ್ವೀಟ್​ ಮಾಡಿದ್ದಾರೆ.

- Advertisement -

Related news

error: Content is protected !!