- Advertisement -
- Advertisement -
ಬೆಂಗಳೂರು: ನಟ ಅರ್ಜುನಾ ಸರ್ಜಾ ಪುತ್ರಿ ಐಶ್ವರ್ಯಾ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ಐಶ್ವರ್ಯಾ ಅರ್ಜುನ್ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲರ ಹಾರೈಕೆಗೆ ಧನ್ಯವಾದಗಳು. ನನಗೆ ಈಗ ಕೊರೊನಾ ನೆಗೆಟಿವ್ ವರದಿ ಬಂದಿದೆ. ಎಲ್ಲರೂ ಆರೋಗ್ಯವಾಗಿರಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಐಶ್ವರ್ಯಾ ಅರ್ಜುನ್ ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಬಗ್ಗೆ ಸ್ವತಃ ಐಶ್ವರ್ಯಾ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

- Advertisement -