Saturday, October 12, 2024
spot_imgspot_img
spot_imgspot_img

ನಟಿ ಐಶ್ವರ್ಯಾ ರೈ ಬಚ್ಚನ್, ಮಗಳು ಆರಾಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -
- Advertisement -

ಮುಂಬೈ: ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದು, ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದಗಳು. ಐಶ್ವರ್ಯಾ ಹಾಗೂ ಆರಾಧ್ಯಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಮನೆಯಿಲ್ಲಿ ಇರಲಿದ್ದಾರೆ. ಆದರೆ ನನ್ನ ತಂದೆ ಹಾಗೂ ನನಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಜುಲೈ 12ರಂದು ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಗೆ ಕೊರೊನಾ ಪಾಸಿಟಿವ್ ಬಂದಿತ್ತು. ನಂತರ ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಮೊದಲಿಗೆ ಹೋಂಕ್ವಾರಂಟೈನ್ ಗೆ ಒಳಗಾಗಿದ್ದ ತಾಯಿ ಮಗಳು ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

- Advertisement -

Related news

error: Content is protected !!