- Advertisement -
- Advertisement -
ಬಂಟ್ವಾಳ :ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಎಂಬಲ್ಲಿ ಸರಕಾರಿ ಜಾಗದ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸೊತ್ತುಗಳ ಸಹಿತ ಬಂಟ್ವಾಳ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಘಟನೆಯಲ್ಲಿ ಆರೋಪಿಗಳಾದ ಶೇಖರ ಸಪಲ್ಯ, ಗಣೇಶ್ ಪೂಜಾರಿ ಹಾಗೂ ಐವನ್ ಅವರನ್ನು ಬಂಧಿಸಲಾಗಿದೆ. ಬಳಿಕ ಅವರಿಂದ ಮುಚ್ಚಳಿಕೆ ಬರೆಸಿ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 3 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಮ್, ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಪಿ, ರೇಖಾ, ದಯಾನಂದ, ವೀಕ್ಷಕ ಪ್ರವೀಣ್ ಹಾಗೂ ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು. ಈ ಪ್ರಕರಣ ತನಿಖೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ನಡೆಸಲಿದ್ದಾರೆ.
- Advertisement -