- Advertisement -
- Advertisement -
ವಿಟ್ಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು
ಪ್ರಕರಣ ದಾಖಲಿಸಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಯಾವುದೇ ಪರವಾನಿಗೆ ಮತ್ತು ದಾಖಲೆ ಪತ್ರಗಳು ಇಲ್ಲದೇ ಅಧಿಕ ಲಾಭ ಗಳಿಸುವ ಉದ್ದೇಶದಿಂದ ಮದ್ಯವನ್ನು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವಿಟ್ಲ ಠಾಣಾ ಪಿ ಎಸ್ ಐ ರವರು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿ ಅಂದಾಜು ಮೌಲ್ಯ 2686/- ಮದ್ಯ ವಶಪಡಿಸಿಕೊಂಡಿದ್ದಾರೆ. ಮದ್ಯವನ್ನು ಮಾರಾಟ ಮಾಡುತ್ತಿದ್ದ ಆರೋಪಿ ಕೇರಳದ ಮಂಜೇಶ್ವರ ತಾಲೂಕಿನ ಬಾಯಾರು ಮುಳಿಗದ್ದೆ ನಿವಾಸಿ ನಾರಾಯಣ(40) ಹಾಗೂ ಬಾರ್‌ನ ವೆಂಡರ್ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ
ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -