Tuesday, June 23, 2026
spot_imgspot_img
spot_imgspot_img

ಬಿಟೌನ್ ಅಕ್ಷಯ್ ಕುಮಾರ್‌ಗೆ ಕೊರೊನಾ ಸೋಂಕು ದೃಢ; ಹೋ ಕ್ವಾರಂಟೈನ್ ಆದ ಕಿಲಾಡಿ

- Advertisement -
- Advertisement -

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಅಕ್ಷಯ್ ಮಾಹಿತಿ ನೀಡಿದ್ದಾರೆ.

ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕೊರೊನಾ ಕುರಿತ ಎಲ್ಲಾ ಮಾರ್ಗಸೂಚಿಗಳನ್ನು ನಾನು ಪಾಲಿಸುತ್ತೇನೆ. ಅಗತ್ಯ ವೈದ್ಯಕೀಯ ನೆರವನ್ನು ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇತ್ತೀಚೆಗೆ ಬಾಲಿವುಡ್ ನಟಿ ಆಲಿಯಾ ಭಟ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ನಟ ಅಕ್ಷಯ್ ಕುಮಾರ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ.

- Advertisement -

Related news

error: Content is protected !!